ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಯುವತಿಯರ ರಕ್ಷಣೆ

Update: 2020-10-11 12:22 GMT

ಬೆಂಗಳೂರು, ಅ. 11: ಯುವತಿಯರನ್ನು ವಶದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಹೊರ ರಾಜ್ಯದ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ಕೋರಮಂಗಲದ ಅಶಪೈ ಲೇಔಟ್‍ನಲ್ಲಿರುವ ಇಕೋ ಬಾಡಿ ಸ್ಪಾ ಅಂಡ್ ಸೆಲೂನ್‍ನಲ್ಲಿ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು ಎನ್ನಲಾಗಿದೆ.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸ್ಪಾ ಮಾಲಕ ಸಿದ್ದಾರ್ಥ್ ತಲೆಮರೆಸಿಕೊಂಡಿದ್ದು, ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News