ಪೊಲೀಸರಲ್ಲಿ ಹೆಚ್ಚಾಗುತ್ತಿರುವ ಕೊರೋನ ಸೋಂಕು

Update: 2020-10-11 12:23 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 11: ಅನ್‍ಲಾಕ್ ಹಿನ್ನೆಲೆ ದೈನಂದಿನ ವ್ಯಾಪಾರ ವಾಹಿವಾಟು ಚುರುಕುಗೊಳ್ಳುತ್ತಿದೆ. ಇದರ ಜತೆ ಭದ್ರತೆಯಲ್ಲಿ ನಿರತರಾಗುತ್ತಿರುವ ಪೊಲೀಸರಲ್ಲಿ ಕೊರೋನ ಸೋಂಕಿನ ಪ್ರಕರನಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ವರದಿಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 23 ಪೊಲೀಸ್ ಸಿಬ್ಬಂದಿ ಕೊರೋನ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದ್ದಾರೆ. ಒಟ್ಟು, 3041 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 2,011 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾದರೆ, 907 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲ ಸಿಬ್ಬಂದಿ 6 ದಿನ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಗಡೆ ಬಂದು 18 ದಿನ ಅಥವಾ 28 ದಿನಗಳ ಕ್ವಾರಂಟೈನ್ ಮುಗಿಸಿ ಮತ್ತೆ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಅದೇ ರೀತಿ, ಸೋಂಕಿತರ ಸಂಪರ್ಕದಲ್ಲಿದ್ದವರನ್ನೂ ಕ್ವಾರಂಟೈನ್ ಗೆ ಒಳಪಡಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News