ಮಿಂಚಿದ ತೆವಾಟಿಯ, ಪರಾಗ್: ಹೈದರಾಬಾದ್ ವಿರುದ್ಧ ರಾಜಸ್ಥಾನಕ್ಕೆ ರೋಚಕ ಗೆಲುವು
Update: 2020-10-11 19:24 IST
ದುಬೈ: ನಿಧಾನಗತಿಯ ಆರಂಭ ಪಡೆದರೂ ಕೊನೆಯಲ್ಲಿ ಪ್ರದರ್ಶಿಸಿದ ಉತ್ತಮ ಬ್ಯಾಟಿಂಗ್ ನಿಂದಾಗಿ ರಾಜಸ್ಥಾನ ರಾಯಲ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿದೆ.
ಗೆಲುವಿಗೆ 159 ರನ್ ಗುರಿ ಪಡೆದ ರಾಜಸ್ಥಾನ ರಾಯಲ್ಸ್ 19.5 ಎಸೆತಗಳಲ್ಲಿ 5 ವಿಕೆಟ್ ನಷ್ಟದಲ್ಲಿ ಗೆಲುವಿನ ಗುರಿ ತಲುಪಿತು. ರಾಹುಲ್ ತೆವಾಟಿಯ ಮತ್ತೊಮ್ಮೆ ತಂಡಕ್ಕೆ ಆಸರೆಯಾದರು. ಅವರು 28 ಎಸೆತಗಳಲ್ಲಿ 45 ರನ್ ಗಳಿಸಿ ಔಟಾಗದೇ ಉಳಿದರು. ರಿಯಾನ್ ಪರಾಗ್ 26 ಎಸೆತಗಳಲ್ಲಿ 42 ರನ್ ಬಾರಿಸಿದರು.
ಹೈದರಾಬಾದ್ ಪರ ರಶೀದ್ ಖಾನ್ ಹಾಗೂ ಖಲೀಲ್ ಅಹ್ಮದ್ ತಲಾ 2 ವಿಕೆಟ್ ಪಡೆದರು.
ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟದಲ್ಲಿ 158 ರನ್ ಗಳಿಸಿತ್ತು.