×
Ad

ಬಂಟ್ವಾಳ : ಅ.13ರಂದು ಗ್ರಾ.ಪಂ. ಕಚೇರಿ ಎದುರು ಕಾಂಗ್ರೆಸ್ ನಿಂದ ಪ್ರತಿಭಟನೆ

Update: 2020-10-11 21:35 IST

ಬಂಟ್ವಾಳ, ಅ.11: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ 39 ಗ್ರಾಮ ಪಂಚಾಯತ್ ಕಚೇರಿಗಳ ಎದುರು ಅ.13ರಂದು ಬೆಳಗ್ಗೆ 10:30ಕ್ಕೆ ಏಕಕಾಲದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದಿಂದ ಧರಣಿ ನಡೆಯಲಿದೆ.

ರಾಜ್ಯ ಬಿಜೆಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಸಹಿತ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕ್ಷೇತ್ರದ 39 ಪಂಚಾಯತ್ ಕಚೇರಿಗಳ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸರಕಾರದ ಸವಲತ್ತುಗಳಿಂದ ವಂಚಿತರಾದವರು ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News