ಮೈಸೂರು ದಸರಾ: ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

Update: 2020-10-16 16:21 GMT

ಮೈಸೂರು,ಅ.11: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರವಿವಾರ ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ಕೋವಿಡ್ 19 ಹರಡದಂತೆ  ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದರು.

ದಸರಾ ಸಂದರ್ಭದಲ್ಲಿ ಯಾವ ರೀತಿಯ ಮಾರ್ಗಸೂಚಿಗಳನ್ನು ಅನುಸರಿಸಬೇಕು, ಯಾವ ಯಾವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಸೂಚನೆ ನೀಡಿದರು. ದಸರಾ ಆಚರಣೆ ಸಂಬಂಧ ತಜ್ಞರ ಸಮಿತಿ ಮೈಸೂರಿಗೆ ಆಗಮಿಸಿ ಪರಿಶೀಲನೆ ನಡೆಸಿ ನಂತರ ಮುಖ್ಯಮಂತ್ರಿಗಳಿಗೆ ವರದಿ ನೀಡಿದ್ದರು. ಅದರ ಪರಿಣಾಮ ಮುಖ್ಯಮಂತ್ರಿಗಳು ಇಂದು ಸಭೆ ನಡೆಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ. ಕೆ.ಅನಿಲ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News