ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ: 65 ಆರೋಪಿಗಳ ಬಂಧನ, 96 ಲಕ್ಷ ರೂ. ಜಪ್ತಿ

Update: 2020-10-11 17:47 GMT

ಬೆಂಗಳೂರು, ಅ.11: ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 65 ಜನರನ್ನು ಬಂಧಿಸಿ, 96 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.

ಮಹದೇವಪುರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣದ ಕುರಿತು ಸಿಸಿಬಿ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಬಂಧಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಡಿಸಿಪಿ ರವಿಕುಮಾರ್ ಹಾಗೂ ತಂಡದಿಂದ ದಾಳಿ ನಡೆದಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News