ಹತ್ರಸ್ ಅತ್ಯಾಚಾರ ಪ್ರಕರಣ: ತನಿಖೆ ಕೈಗೆತ್ತಿಕೊಂಡ ಸಿಬಿಐ

Update: 2020-10-11 18:28 GMT

ಲಕ್ನೊ, ಅ.11: ಉತ್ತರಪ್ರದೇಶದ ಹಥಾರಸ್‌ನಲ್ಲಿ ದಲಿತ ಮಹಿಳೆಯ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು ರವಿವಾರ ಬೆಳಿಗ್ಗೆ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 ಹತ ಮಹಿಳೆಯ ಸಹೋದರ ನೀಡಿದ ದೂರಿನಂತೆ ಈ ಮೊದಲು ಚಾಂದ್‌ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆಧಾರದಲ್ಲಿ ಐಪಿಸಿ ಸೆಕ್ಷನ್‌ನಡಿ ಎಫ್‌ಐಆರ್ ದಾಖಲಿಸಲಾಗಿದೆ. 14-09-2020ರಂದು ಆರೋಪಿ ರಾಗಿಯ ಗದ್ದೆಯಲ್ಲಿ ತನ್ನ ಸಹೋದರಿಯ ಕತ್ತು ಹಿಸುಕಲು ಪ್ರಯತ್ನಿಸಿದ್ದ ಎಂದು ಮಹಿಳೆಯ ಸಹೋದರ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಸಿಬಿಐ ವಕ್ತಾರ ಆರ್‌ಕೆ ಗೌರ್ ಹೇಳಿದ್ದಾರೆ.

ಉತ್ತರಪ್ರದೇಶ ಸರಕಾರದ ಕೋರಿಕೆಯಂತೆ ಮತ್ತು ಭಾರತ ಸರಕಾರದ ಅಧಿಸೂಚನೆಯ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿದೆ. ಪ್ರಕರಣದ ತನಿಖೆಗೆ ತಂಡವೊಂದನ್ನು ರಚಿಸಲಾಗಿದೆ ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News