ದಾವಣಗೆರೆ : ಮಾಜಿ ಶಾಸಕ ಕೆ. ಮಲ್ಲಪ್ಪ ನಿಧನ

Update: 2020-10-12 03:51 GMT

ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ  ಮಾಜಿ ಶಾಸಕ ಕೆ.ಮಲ್ಲಪ್ಪ (92) ಅವರು ಇಂದು ನಿಧನರಾಗಿದ್ದಾರೆ.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ನಿಧನರಾದರು. 

ದಾವಣಗೆರೆ ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ  ಶಾಸಕರಾಗಿ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿದ್ದರು.  ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಕೆ. ಮಲ್ಲಪ್ಪ ಅಹಿಂದಾ ಸಂಘಟನೆಯ ಪ್ರಮುಖರಾಗಿದ್ದರು.

ಅವರು ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನ ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News