ಉಡುಪಿ ತಾಲೂಕು ಆಸ್ಪತ್ರೆಗಳಲ್ಲಿ ತೆರವಾದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಉಡುಪಿ, ಅ.12: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಾದ ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಗಳಿಗೆ ಕೋವಿಡ್ ಹತೋಟಿ ಹಿನ್ನೆಲೆಯಲ್ಲಿ ತೆರವಾ ಗಿರುವ ಶುಶ್ರೂಷಕರ 29 ಹುದ್ದೆ, ಪ್ರಯೋಗಶಾಲಾ ತಂತ್ರಜ್ಞರ 45 ಹುದ್ದೆ ಹಾಗೂ ಗ್ರೂಪ್ ಡಿ 29 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಅಕ್ಟೋಬರ್ 15ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಅಜ್ಜರಕಾಡು, ಉಡುಪಿ ಇವರಿಗೆ ಸಲ್ಲಿಸಿ, ಅ.19 ರಂದು ಬೆಳಗ್ಗೆ 10:30ಕ್ಕೆ ನಡೆಯುವ ಸಂದರ್ಶನದಲ್ಲಿ ವಿದ್ಯಾರ್ಹತೆ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಗುತ್ತಿಗೆ ಆಧಾರದಲ್ಲಿ ನೇಮಕ: ಪ್ರಸಕ್ತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಶುಶ್ರೂಷಕರು, ಎಲ್‌ಎಚ್, ಡೆಂಟಲ್ ಹೈಜೆನಿಸ್ಟ್, ಎಂಬಿಬಿಎಸ್ ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಇನ್‌ಸ್ಟ್ರೆಕ್ಟರ್ ಫಾರ್‌ದ ಯಂಗ್ ಹಿಯರಿಂಗ್ ಇಂಪಾಯರ್ಡ್ ಚಿಲ್ಡ್ರನ್ ಹಾಗೂ ಆರ್‌ಎಂಎನ್‌ಸಿಎಚ್‌ಎ ಕೌನ್ಸಿಲರ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅ.16ರಂದು ಬೆಳಿಗ್ಗೆ 10:30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.