ಡಿವಿಲಿಯರ್ಸ್ ಬ್ಯಾಟಿಂಗ್ ಅಬ್ಬರ: ಕೊಲ್ಕತ್ತಾ ಗೆಲುವಿಗೆ 195 ರನ್ ಗುರಿ ನೀಡಿದ ಆರ್‌ಸಿಬಿ

Update: 2020-10-12 15:50 GMT

ಶಾರ್ಜಾ: ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಲ್ಕತ್ತಾ ನೈಟ್ ರೈದರ್ಸ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದ್ದು, ಕೊಲ್ಕತ್ತಾ ಗೆಲುವಿಗೆ 195 ರನ್ ಗುರಿ ನೀಡಿದೆ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತು. ಆರಂಭಿಕ ಆಟಗಾರ ಆರೋನ್ ಫಿಂಚ್ 47 ಹಾಗೂ ದೇವದತ್ತ ಪಡಿಕ್ಕಲ್ 32 ರನ್, ನಾಯಕ ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ 33 ರನ್ ಬಾರಿಸಿದರು. ಕೊನೆಯಲ್ಲಿ ಡಿವಿಲಿಯರ್ಸ್ ಕೇವಲ 33 ಎಸೆತಗಳಲ್ಲಿ 73 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು.

ಕೊಲ್ಕತ್ತಾ ಪರ ಆ್ಯಂಡ್ರೆ ರಸ್ಸೆಲ್ ಮತ್ತು ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News