ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ 2.85 ಲಕ್ಷಕ್ಕೆ ಏರಿಕೆ

Update: 2020-10-12 16:14 GMT

ಬೆಂಗಳೂರು, ಅ.12: ನಗರದಲ್ಲಿ ಸೋಮವಾರ ಒಂದೇ ದಿನ 3,498 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 5,764 ಸೋಂಕಿತರು ಬಿಡುಗಡೆಯಾಗಿದ್ದು, 18 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,85,055 ಜನರಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 3,362 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,17,122 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 64,570 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 3,40,039 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ರವಿವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 18 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 7,68,852 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 9,13,431 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 20,51,439 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.50ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.20ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.75.36ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News