ವಿಧಾನ ಪರಿಷತ್ ಚುನಾವಣೆ: ಮತದಾನ ಮಾಡಲು ಮತದಾರರಿಗೆ ಪರ್ಯಾಯ ದಾಖಲೆಗಳು

Update: 2020-10-12 17:00 GMT

ಬೆಂಗಳೂರು, ಅ.12: ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್)ಯನ್ನು ಹಾಜರುಪಡಿಸಬೇಕು.

ಒಂದು ವೇಳೆ ಅದನ್ನು ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಪರ್ಯಾಯ ದಾಖಲಾತಿಯನ್ನು ಮತದಾರರನ್ನು ಗುರುತಿಸುವುದಕ್ಕಾಗಿ ಹಾಜರುಪಡಿಸಬೇಕು ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

ಮತದಾನಕ್ಕೆ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್, ಭಾರತೀಯ ಪಾಸ್‍ಪೋರ್ಟ್, ರಾಜ್ಯ/ಕೇಂದ್ರ ಸರಕಾರ ಹಾಗೂ ಸಾರ್ವಜನಿಕ ವಲಯದಡಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು.

ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರಿಗೆ ಅಧಿಕೃತವಾಗಿ ನೀಡಿರುವ ಗುರುತಿನ ಚೀಟಿಗಳು, ಚುನಾವಣಾ ನಡೆಯುತ್ತಿರುವ ಕ್ಷೇತ್ರದ ಶಿಕ್ಷಣ ಸಂಸ್ಥೆಗಳು ಶಿಕ್ಷಕರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾಲಯ ನೀಡಿರುವ ಡಿಪ್ಲೋಮಾ/ಪದವಿ ಪ್ರಮಾಣಪತ್ರ, ಪ್ರಾಧಿಕಾರ ನೀಡಿದ ದೈಹಿಕ ಅಂಗವಿಕಲತೆಯ ಪ್ರಮಾಣ ಪತ್ರವನ್ನು ಹಾಜರುಪಡಿಸಿ ಮತಚಲಾಯಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News