ಹಿರಿಯಡ್ಕ: ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಯ ಬಂಧನ

Update: 2020-10-13 07:41 GMT
ಸಾಂದರ್ಭಿಕ ಚಿತ್ರ

ಹಿರಿಯಡ್ಕ, ಅ.13: ಎರಡು ತಿಂಗಳ ಹಿಂದೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಲಿತ ಬಾಲಕಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಅ.12ರಂದು ಬಂಧಿಸಿದ್ದಾರೆ.

ಬೈರಂಪಳ್ಳಿಯ ಪ್ರದೀಪ್ ಶೆಟ್ಟಿ(39) ಬಂಧಿತ ಆರೋಪಿ. ಈತ ಆ.24ರಂದು ಮಧ್ಯಾಹ್ನ ವೇಳೆ ಮನೆಯಲ್ಲಿದ್ದ 13 ವರ್ಷ ಪ್ರಾಯದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾದ ಆರೋಪ ಎದುರಿಸುತ್ತಿದ್ದಾನೆ.

ಈತ ಬಾಲಕಿ ಮನೆ ಸಮೀಪ ನಡೆಯುತ್ತಿದ್ದ ರಸ್ತೆ ಕಾಮಗಾರಿಯ ಸುಪರ್‌ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ಇದೇವೇಳೆ ಮನೆ ಸಮೀಪ ಈ ಕೃತ್ಯ ಎಸಗಿದ್ದನು ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News