ಮಿಥುನ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಪುತ್ತೂರು ನಗರ ಠಾಣೆಯಲ್ಲಿ ದೂರು

Update: 2020-10-13 10:22 GMT

ಪುತ್ತೂರು, ಅ.13: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಸ್ಸಿ ಘಟಕವು ಪುತ್ತೂರು ನಗರ ಠಾಣೆಗೆ ದೂರು ನೀಡಿದೆ.

ಕುಮಾರಸ್ವಾಮಿ ಚಿತ್ರದುರ್ಗ ಎಂಬಾತನ ವಿರುದ್ಧ ದೂರು ನೀಡಲಾಗಿದೆ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಮಾತನಾಡಿದ್ದ ವಿಚಾರಕ್ಕೆ ಸಂಬಂಧಿಸಿ ಮಿಥುನ್ ರೈ ಕುರಿತು ಗರುಡಕೇಸರಿ ಕುಮಾರಸ್ವಾಮಿ ಚಿತ್ರದುರ್ಗ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಪೋಸ್ಟ್‌ಗಳನ್ನು ಹಾಕಿದ್ದಾನೆ. ಆದ್ದರಿಂದ ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ದಲಿತ ಮಖಂಡರಾದ ಕೇಶವ ಪಡೀಲ್, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ಅವರು ಪುತ್ತೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News