×
Ad

ಶಾರ್ಟ್ ಸರ್ಕ್ಯೂಟ್ ನಿಂದ ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

Update: 2020-10-13 22:52 IST

ಪಾಂಡವಪುರ, ಅ.13: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ಲಾಸ್ಟಿಕ್ ಅಂಗಡಿಯೊಂದು ಸಂಪೂರ್ಣ ಭಸ್ಮವಾಗಿರುವ ಘಟನೆ ಪಟ್ಟಣದ ಹಳೇ ಬಸ್‍ ನಿಲ್ದಾಣದ ದೊಡ್ಡ ಮಸೀದಿಗೆ ಸೇರಿದ ಗೌಸಿಯಾ ಕಾಂಪ್ಲೆಕ್ಸ್ ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಪಟ್ಟಣದ ನಯೀಮ್‍ ಪಾಷ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ಬ್ಯಾಗ್ ಅಂಗಡಿಯಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಸುಮಾರು 3 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಪ್ಲಾಸ್ಟಿಕ್ ಶಾಲಾ ಬ್ಯಾಗುಗಳು ಮತ್ತಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. 

ಸ್ಥಳಕ್ಕೆ ಧಾವಿಸಿದ ಸೆಸ್ಕ್ ಇಲಾಖೆಯ ಅಧಿಕಾರಿಗಳು ಕೂಡಲೇ ಕಾಂಪ್ಲೆಕ್ಸ್ ನಲ್ಲಿನ ಇಡೀ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಅಗ್ನಿಶಾಮಕ ತಂಡದವರು ಧಾವಿಸಿ ಅಂಗಡಿ ಬಾಗಿಲು ಮೀಟಿ ರೋಲಿಂಗ್ ಶೆಲ್ಟರ್ ತೆರೆದು ಬೆಂಕಿ ನಂದಿಸಿದರು.

ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ನಷ್ಟದ ಅಂದಾಜು ನಡೆಸಿ ಸೆಸ್ಕ್ ಇಲಾಖೆ ಮೂಲಕ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದರು. ಶಾಸಕ ಸಿ.ಎಸ್.ಪುಟ್ಟರಾಜು ನಯೀಂ ಪಾಷ ಅವರಿಗೆ ದೂರವಾಣಿ ಕರೆ ಮಾಡಿ ಧೈರ್ಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News