ಆಟಿಕೆ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಮೃತ್ಯು, 10 ಮಂದಿಗೆ ಗಾಯ
Update: 2020-10-13 23:35 IST
ಲಕ್ನೊ: ಉತ್ತರಪ್ರದೇಶದ ಅಲಿಗಢದಲ್ಲಿ ಮಂಗಳವಾರ ಆಟಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂರು ಮಂದಿ ಮೃತಪಟ್ಟಿದ್ದರೆ, ಸುಮಾರು 10 ಮಂದಿ ಗಾಯಗೊಂಡಿದ್ದಾರೆ.
ಸ್ಫೋಟದ ರಭಸಕ್ಕೆ ಕಟ್ಟಡದ ಮೇಲ್ಛಾವಣೆ ಕುಸಿದುಬಿದ್ದಿದೆ. ಅವಶೇಷಗಳಡಿಸಿಲುಕಿರುವವರನ್ನು ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ.