ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ.ಶಿವಕುಮಾರ್

Update: 2020-10-14 09:59 GMT

ಬೆಂಗಳೂರು, ಅ.14: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸರಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡುತ್ತಿದ್ದರು.

'ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ನಮ್ಮೆಲ್ಲ ನಾಯಕರು ಸೇರಿ ವಿದ್ಯಾವಂತ, ಯುವ ಹೆಣ್ಣು ಮಗಳನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಈ ಕ್ಷೇತ್ರದ ಮತದಾರರು ಬಹಳ ವಿದ್ಯಾವಂತ, ಪ್ರಜ್ಞಾವಂತ ಹಾಗೂ ಬುದ್ಧಿವಂತರಿದ್ದಾರೆ. ಇಲ್ಲಿನ ಮತದಾರರು ಎರಡು ಬಾರಿ ಸತತವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರಕಾರದ ಬೆದರಿಕೆಗೆ ಬಗ್ಗಲ್ಲ:

ಕೆ.ಜೆ. ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ನವರು ಇಲ್ಲಾ. ಕಾಂಗ್ರೆಸೇತರರು ಮಾಡಿರುವ ಗಲಾಟೆ ಅದು. ಬಿಜೆಪಿ ಸರಕಾರ ಹೆದರಿಸಿ ಬೆದರಿಸಿ ರಾತ್ರೋರಾತ್ರಿ ಕಾಂಗ್ರೆಸ್ ನವರ ಹೆಸರು ಸೇರಿಸಿದ್ದಾರೆ ಎಂದು ಆರೋಪಿಸಿದ ಡಿಕೆಶಿ, ನಮ್ಮನ್ನ ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಪರಮೇಶ್ವರ ಅವರನ್ನ ಕರೆದು ಸಿಬಿಐ ತನಿಖೆ ಮಾಡಿದೆ‌. ನಮ್ಮಿಬ್ಬರು ಶಾಸಕರನ್ನು ನಿನ್ನೆ ತನಿಖೆ ಮಾಡಿದ್ದಾರೆ. ಈ ಬೆದರಿಕೆಗೆಲ್ಲಾ ನಾವು ಬಗ್ಗಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News