ಭಾರೀ ಮಳೆ: ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸಿಎಂ ಸೂಚನೆ
Update: 2020-10-14 19:55 IST
ಬೆಂಗಳೂರು, ಅ.14: ರಾಜ್ಯದ ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
‘ಇಂದು ಅಡಿಕೆ ಟಾಸ್ಕ್ ಫೋರ್ಸ್ ಸದಸ್ಯರ ಸಭೆ ನಡೆಸಲಾಯಿತು. ಅಡಿಕೆ ಬೆಳೆಗಾರರು ಕೆಲ ವಿಚಾರಗಳ ಬಗ್ಗೆ ಆತಂಕಗೊಂಡಿರುವ ವಿಷಯ ತಿಳಿದುಬಂದಿದ್ದು, ಸರಕಾರ ಅಡಿಕೆ ಬೆಳೆಗಾರರ ಜೊತೆಗಿದೆ, ಬೆಳೆಗಾರರು ಯಾವುದೇ ರೀತಿಯಲ್ಲೂ ಆತಂಕಪಡುವ ಅಗತ್ಯವಿಲ್ಲ. ಟಾಸ್ಕ್ ಫೋರ್ಸ್‍ಗೆ ತಕ್ಷಣವೇ ಮೂಲಸೌಕರ್ಯ ವ್ಯವಸ್ಥೆ ಮಾಡುವಂತೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.