ಅ.14ರಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ: ಮೈಸೂರು ಜಿಲ್ಲಾಧಿಕಾರಿ ಸಿಂಧೂರಿ

Update: 2020-10-14 16:56 GMT

ಮೈಸೂರು,ಅ.14: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲು ಇನ್ನೆರಡು ದಿನಗಳು ಬಾಕಿ ಇದ್ದು ನಾಡ ಹಬ್ಬ ಸಮೀಪಿಸುತ್ತಿದ್ದಂತೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಅ.14 ರ ಮಧ್ಯರಾತ್ರಿಯಿಂದ ಅಕ್ಟೋಬರ್ 18ರ ಮಧ್ಯರಾತ್ರಿವರೆಗೆ ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ ಹಾಗೂ ಅಕ್ಟೋಬರ್ 23 ರಿಂದ ನವೆಂಬರ್ 1ರ ವರೆಗೂ ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ. ಅಕ್ಟೋಬರ್ 17 ರಂದು ದಸರಾ ಉದ್ಘಾಟನೆಗೆ ಆಹ್ವಾನಿತರಿಗೆ ಮಾತ್ರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗಿದೆ.

ಅಕ್ಟೋಬರ್ 15 ರಿಂದ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ವತಿಯಿಂದ ಪೂರ್ವ ಸಿದ್ಧತೆ ನಡೆಸಲಾಗುತ್ತಿದ್ದು, ಪೂರ್ವ ಸಿದ್ಧತೆ ವೇಳೆ, ಸಿದ್ಧತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮಸ್ಥರು ಹೊರತುಪಡಿಸಿ, ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.

ಕೋವಿಡ್ ಮಹಾಮಾರಿ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಮಧ್ಯೆ ಎಂದಿನಂತೆ ತಾಯಿ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆಗಳು ನೆರವೇರಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News