ಉ.ಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ: ಗಂಜಿ ಕೇಂದ್ರ ತೆರೆಯಲು ಎಸ್.ಆರ್.ಪಾಟೀಲ್ ಒತ್ತಾಯ

Update: 2020-10-14 17:33 GMT

ಬೆಂಗಳೂರು, ಅ. 14: `ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡಲೇ ಸಂತ್ರಸ್ತರಿಗೆ ಗಂಜಿ ಕೇಂದ್ರಗಳನ್ನು ತೆರೆದು ಆಹಾರ, ಔಷಧ ಮತ್ತು ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡಬೇಕು' ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಆಗ್ರಹಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, `ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ. ಹೀಗಾಗಿ ಪ್ರವಾಹ ಪೀಡಿತ ಪ್ರದೇಶಗಳ ಜನ ಎಚ್ಚರಿಕೆಯಿಂದ ಇರಬೇಕು' ಎಂದು ಸಲಹೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News