ಹತ್ರಸ್ ಅತ್ಯಾಚಾರ, ಹತ್ಯೆ ಪ್ರಕರಣ: ಸಿಬಿಐ ತನಿಖೆಯ ಮೇಲ್ವಿಚಾರಣೆ ನಡೆಸಿ: ಸುಪ್ರೀಂಕೋರ್ಟ್‌ನಲ್ಲಿ ಉ.ಪ್ರ. ಸರಕಾರ ಮನವಿ

Update: 2020-10-14 17:46 GMT

ಹೊಸದಿಲ್ಲಿ, ಅ. 14: ಉತ್ತರಪ್ರದೇಶದ ಹತ್ರಸ್ ನ ದಲಿತ ಯುವತಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಕುರಿತು ಸಿಬಿಐ ನಡೆಸುತ್ತಿರುವ ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಉತ್ತರಪ್ರದೇಶ ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮನವಿ ಮಾಡಿದೆ.

ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಹಾಗೂ ಸಾಕ್ಷಿಗಳಿಗೆ ಸಂಪೂರ್ಣ ರಕ್ಷಣೆ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಕೂಡ ಉತ್ತರಪ್ರದೇಶ ಸರಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಪ್ರಕರಣದ ಬಗ್ಗೆ ಸಿಬಿಐ ಬುಧವಾರ ತನಿಖೆ ಆರಂಭಿಸಿದೆ. ಸಿಬಿಐ ಅಧಿಕಾರಿಗಳ ತಂಡ ಹತ್ಯೆಯಾದ ದಲಿತ ಯುವತಿಯ ಮನೆಗೆ ಭೇಟಿ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಹದಿನೈದು ದಿನಗಳಿಗೆ ಒಮ್ಮೆ ರಾಜ್ಯ ಸರಕಾರಕ್ಕೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಬೇಕು. ಇದರಿಂದ ಪೊಲೀಸ್ ವರಿಷ್ಠರ ಮೂಲಕ ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಉತ್ತರಪ್ರದೇಶ ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News