×
Ad

ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ, 9 ಯುವತಿಯರ ರಕ್ಷಣೆ

Update: 2020-10-15 18:30 IST

ಬೆಂಗಳೂರು, ಅ.15: ಉದ್ಯೋಗ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಲು ಕರೆತಂದಿದ್ದ 9 ಯುವತಿಯರನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಪ್ರಕರಣ ಸಂಬಂಧ ಸತ್ತಾರ್ ಬೇಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಎಚ್‍ಬಿಆರ್ ಲೇಔಟ್ ಡಿಸೈನ್ಸ್ ಸ್ಪಾದಲ್ಲಿ ಹೊರರಾಜ್ಯದ ಹುಡುಗಿಯರನ್ನು ಕೆಲಸ ಕೊಡಿಸುವ ಆಮಿಷವೊಡ್ಡಿ ತದನಂತರ ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದರು. ಈ ಕುರಿತು ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣೆ ಪೊಲೀಸರಿಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News