×
Ad

ವಿಧಾನಪರಿಷತ್ ಚುನಾವಣೆ: ಪರ್ಯಾಯ ದಾಖಲೆ ಸಲ್ಲಿಸಿ ಮತ ಚಲಾಯಿಸಲು ಅವಕಾಶ

Update: 2020-10-15 18:36 IST

ಬೆಂಗಳೂರು, ಅ.15: ಭಾರತ ಚುನಾವಣ ಆಯೋಗದ ಆದೇಶದಂತೆ ಕರ್ನಾಟಕ ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಗುರುತಿನ ಚೀಟಿ ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ದಾಖಲೆ ಸಲ್ಲಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಮತ ಚಲಾಯಿಸಲು ಪರ್ಯಾಯ ದಾಖಲೆಗಳಾದ ಆಧಾರ್ ಕಾರ್ಡ್, ವಾಹನ ಚಾಲನಾ ಪರವಾನಿಗೆ, ಪಾನ್‍ ಕಾರ್ಡ್, ಪಾಸ್‍ಪೋರ್ಟ್, ಕೇಂದ್ರ, ರಾಜ್ಯ ಸರಕಾರಿ ನೌಕರರಾಗಿದ್ದಲ್ಲಿ ಗುರುತಿನ ಚೀಟಿ, ಸಂಸದರು, ಶಾಸಕರು ನೀಡಿದ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳು ನೀಡಿದ ಸೇವಾ ಗುರುತಿನ ಚೀಟಿ, ಪದವಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರವನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಚುನಾವಣಾಧಿಕಾರಿ ನವೀನ್‍ರಾಜ್ ಸಿಂಗ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News