ವಿವಿಧ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ
Update: 2020-10-15 19:54 IST
ಬೆಂಗಳೂರು, ಅ. 15: 2020-21ನೆ ಶೈಕ್ಷಣಿಕ ಸಾಲಿಗೆ ಕರ್ನಾಟಕ ವ್ಯಾಪ್ತಿಯಲ್ಲಿನ ಹಾಗೂ ಅನ್ಯ ರಾಜ್ಯಗಳ ವಿಶ್ವವಿದ್ಯಾನಿಲಯಗಳಿಂದ ಸ್ನಾತಕ ಪದವಿಯಲ್ಲಿ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅ.20ರ ವರೆಗೆ ವಿಸ್ತರಿಸಲಾಗಿದ್ದು, ಕೌನ್ಸೆಲಿಂಗ್ ದಿನಾಂಕಗಳನ್ನು ಮುಂದೂಡಲಾಗಿದೆ.
ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ತಪ್ಪದೇ ಕೊನೆಯ ದಿನಾಂಕದೊಳಗೆ ಮುದ್ರಿತ ಅರ್ಜಿ ನಮೂನೆಯೊಂದಿಗೆ ನಿಗದಿತ ದಾಖಲೆಗಳನ್ನು ಸಂಬಂಧಿಸಿದ ವಿಭಾಗಗಳಿಗೆ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ನಿಂದ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.