ಪಬ್‌ಜಿ ಆಡುವಾಗ ಪರಿಚಿತರಾದ ವ್ಯಕ್ತಿಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ

Update: 2020-10-15 14:44 GMT

ಭೋಪಾಲ್, ಅ.15: ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಪರಿಚಿತರಾದ ಮೂವರು ವ್ಯಕ್ತಿಗಳು 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಧ್ಯಪ್ರದೇಶದ ಭೋಪಾಲದ ರಂಭಾನಗರ ಪ್ರದೇಶದ ನಿವಾಸಿಗಳಾಗಿದ್ದು 18-19 ವರ್ಷದವರಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಬಾಲಕಿಯ ಪರಿಚಯವಾಗಿತ್ತು. ಸೆಪ್ಟಂಬರ್‌ನಲ್ಲಿ ಬಾಲಕಿಯನ್ನು ಪುಸಲಾಯಿಸಿ ರಂಭಾನಗರಕ್ಕೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಘಟನೆಯ ವೀಡಿಯೊ ಚಿತ್ರೀಕರಿಸಿಕೊಂಡಿದ್ದರು. ಅತ್ಯಾಚಾರದ ಬಗ್ಗೆ ಬಾಯಿಬಿಟ್ಟರೆ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ.

ಕಳೆದ ವಾರ ಬಾಲಕಿ ವಿಷಯವನ್ನು ಹೆತ್ತವರಿಗೆ ತಿಳಿಸಿದ ಬಳಿಕ ಪೊಲೀಸರಿಗೆ ದೂರು ನೀಡಿದ್ದು ಮೂವರು ಆರೋಪಿಗಳನ್ನೂ ಬಂಧಿಸಿದ್ದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅಲೋಕ್ ಶ್ರೀವಾಸ್ತವ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News