ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ
ಉಡುಪಿ, ಅ.15: ಪ್ರತೀ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಕಾರದ ಮಾರ್ಗಸೂಚಿಯಂತೆ ನಡೆಸಲಾಗು ವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನ. 1ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಕೋವಿಡ್-19 ಸೋಂಕು ಇರುವ ಹಿನ್ನಲೆ ಕಾರ್ಯಕ್ರಮವನ್ನು ಸರಕಾರದ ಮಾರ್ಗಸೂಚಿಯಂತೆ ಆಯೋಜಿಸ ಬೇಕು ಎಂದು ಸೂಚನೆ ನೀಡಿದರು. ಕಳೆದ ವರ್ಷ ನಡೆ ದಂತೆ ಕಾರ್ಯಕ್ರಮ ನಡೆಯಲು ಬೇಕಾದ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.