ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಮಾಂಡ್ ಕಂಟ್ರೋಲ್ ಕೇಂದ್ರ ಸ್ಥಾಪನೆ: ಆನಂದ್ ಸಿಂಗ್

Update: 2020-10-15 18:26 GMT

ಬೆಂಗಳೂರು, ಅ.15: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಅರಣ್ಯ ಸಚಿವ ಆನಂದ್‍ ಸಿಂಗ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ಹಾಗೂ ಇತರ ಇಲಾಖೆಗಳು ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕ, ಸಲಹೆ, ಮಾಹಿತಿ ಹಾಗೂ ದೂರನ್ನು ದಾಖಲಿಸಲು ಮಂಡಳಿಯಲ್ಲಿ ಸೂಕ್ತ ವ್ಯವಸ್ಥೆಯನ್ನು ಸ್ಥಾಪಿಸುವಂತೆ ನಿರ್ದೇಶನ ಮಾಡಿದ್ದು, ಅದರ ಪ್ರಕಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಮಾಂಡ್-ಕಂಟ್ರೋಲ್ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ ಹಾಗು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ವಿಜಯಕುಮಾರ್ ಗೋಗಿ, ಮಂಡಳಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಹಾಗೂ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

ಈ ಕಮಾಂಡ್-ಕಂಟ್ರೋಲ್ ಸೆಂಟರ್ ನ ದೂ: 080-25582559ಕ್ಕೆ ಸಾರ್ವಜನಿಕರು ಮತ್ತು ಇತರೆ ಸಂಬಂಧಿತ ಇಲಾಖೆ ಅಧಿಕಾರಿಗಳು ದೂರನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News