ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Update: 2020-10-15 18:11 GMT

ಬೆಂಗಳೂರು, ಅ. 15: ಸಚಿವಾಲಯ ಗ್ರಂಥಾಲಯದಲ್ಲಿ 2020-21ನೆ ಸಾಲಿನ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಗ್ರಾಜುಯೇಟ್ ಅಪ್ರೆಂಟಿಸ್ (ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ) ತರಬೇತಿಗೆ ಲೈಬ್ರರಿ ಸೈನ್ಸ್‍ನಲ್ಲಿ ಪದವಿ (ಬಿ.ಎಲ್.ಐ.ಎಸ್.ಸಿ) ಪಡೆದಿರಬೇಕು. ಇವರಿಗೆ ಪ್ರತಿ ತಿಂಗಳು 10 ಸಾವಿರ ರೂ. ಸ್ಟೈಪಂಡ್ ನೀಡಲಾಗುವುದು. ಟೆಕ್ನಿಶಿಯನ್ ಅಪ್ರೆಂಟಿಸ್ (ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ)ಗೆ ಲೈಬ್ರರಿ ಸೈನ್ಸ್‍ನಲ್ಲಿ ಡಿಪ್ಲೋಮಾ ಪಡೆದಿರಬೇಕು. ಇವರಿಗೆ ಪ್ರತಿ ತಿಂಗಳು 8 ಸಾವಿರ ರೂ. ಸ್ಟೈಪಂಡ್ ನೀಡಲಾಗುವುದು. ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್(ಕರ್ಮಷಿಯಲ್ ಪ್ರಾಕ್ಟಿಸ್)ಗೆ ಕರ್ಮಷಿಯಲ್ ಪ್ರಾಕ್ಟಿಸ್‍ನಲ್ಲಿ ಡಿಪ್ಲೋಮಾ ಪಡೆದಿರಬೇಕು. ಇವರಿಗೆ ಪ್ರತಿ ತಿಂಗಳು 8 ಸಾವಿರ ರೂ. ಸ್ಟೈಪಂಡ್ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಪ್ರಧಾನ ಮುಖ್ಯ ಗ್ರಂಥಾಧಿಕಾರಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂ: 11 ನೆಲಮಹಡಿ, ವಿಧಾನಸೌಧ ಬೆಂಗಳೂರು-560001 ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ವೆಬ್‍ಸೈಟ್ ಹಾಗೂ ದೂರವಾಣಿ ಸಂಖ್ಯೆ: 080-2203 3462/ 3011ನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರಕಾರದ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News