ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ‘ಕಳವಳಕಾರಿ’: ವಿಶ್ವ ಆರೋಗ್ಯ ಸಂಸ್ಥೆ

Update: 2020-10-15 18:20 GMT

ಕೋಪನ್‌ಹೇಗನ್ (ಡೆನ್ಮಾರ್ಕ್), ಅ. 15: ಯುರೋಪ್‌ನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ‘ಭಾರೀ ಕಳವಳ’ದ ಸಂಗತಿಯಾಗಿದೆ, ಆದರೆ ಪರಿಸ್ಥಿತಿ ಈಗಲೂ ಎಪ್ರಿಲ್‌ನಲ್ಲಿ ಇದ್ದ ಪರಿಸ್ಥಿತಿಗಿಂತ ಉತ್ತಮವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ಕಚೇರಿ ಮಂಗಳವಾರ ತಿಳಿಸಿದೆ.

‘‘ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ’’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್‌ನ ಪ್ರಾದೇಶಿಕ ನಿರ್ದೇಶಕ ಹಾನ್ಸ್ ಕ್ಲಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

‘‘ಆದರೆ, ಮಾರ್ಚ್ ಮತ್ತು ಎಪ್ರಿಲ್‌ನಲ್ಲಿ ಇದ್ದಷ್ಟು ತೀವ್ರತೆ ಈಗ ಇಲ್ಲ’’ ಎಂದು ಅವರು ಅಭಿಪ್ರಾಯಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News