ಗ್ರೂಪ್ 'ಎ' ವೃಂದದ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

Update: 2020-10-15 18:20 GMT

ಬೆಂಗಳೂರು, ಅ. 15: ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ `ಎ' ವೃಂದದ ಬಿ.ಎಸ್ಸಿ ಫಾರೆಸ್ಟ್ರಿ ವಿಷಯದಲ್ಲಿ ಪದವಿ ಹೊಂದಿದವರಿಂದ 8 ಹುದ್ದೆಗಳು ಹಾಗೂ ಬಿ.ಎಸ್ಸಿ. ಫಾರೆಸ್ಟ್ರಿ ವಿಷಯವಲ್ಲದ ವಿಜ್ಞಾನ/ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಹೊಂದಿದವರಿಂದ 8 ಹುದ್ದೆಗಳು ಸೇರಿ ಒಟ್ಟು 16 ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅ. 20ರಿಂದ ನವೆಂಬರ್ 20ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಶುಲ್ಕ ಪಾವತಿಸಲು ನವೆಂಬರ್ 21 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಆಯೋಗದ ವೆಬ್‍ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಕೋರಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News