'ಕಾವೇರಿ ಕೂಗು' ಅಭಿಯಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಪಿಐಎಲ್ ಆಗಿ ಪರಿವರ್ತಿಸಿದ ಹೈಕೋರ್ಟ್
Update: 2020-10-16 18:28 IST
ಬೆಂಗಳೂರು, ಅ.16: ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ನೇತೃತ್ವದ ಕಾವೇರಿ ಕೂಗು ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವ ಕ್ರಮ ಪ್ರಶ್ನಿಸಿ ವಕೀಲ ಎ.ವಿ.ಅಮರನಾಥನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಹೈಕೋರ್ಟ್ ಪರಿವರ್ತಿಸಿಕೊಂಡಿದೆ.
ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರ ನಡವಳಿಕೆ ಸಾರ್ವಜನಿಕ ಹಿತಾಸಕ್ತಿಗೆ ತಕ್ಕದಾಗಿಲ್ಲ. ಹೀಗಾಗಿ, ಅರ್ಜಿಯನ್ನು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸಿಕೊಂಡು ವಕೀಲರೊಬ್ಬರನ್ನು ಅಮಿಕಸ್ ಕ್ಯೂರಿ(ಕೋರ್ಟ್ ಸಹಾಯಕ) ಆಗಿ ನೇಮಕ ಮಾಡಿ ವಿಚಾರಣೆ ಮುಂದುವರಿಸಲಾಗುವುದು ಎಂದು ನ್ಯಾಯಪೀಠ ಹೇಳಿತು.