ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Update: 2020-10-16 16:28 GMT

ಮಂಗಳೂರು, ಅ.16:ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ದ.ಕ. ಅಪರ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ತಿಳಿಸಿದರು.

ದ.ಕ.ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ದರು.

ನ.1ರಂದು ನಗರದ ನೆಹರೂ ಮೈದಾನದಲ್ಲಿ ಬೆಳಗ್ಗೆ 8:45ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣಗೈದು ಸಂದೇಶ ನೀಡಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರಸಲಾಗುವುದು ಎಂದರು.

ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ವೆಂಕಟೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪದ್ರೀಪ್ ಕುಮಾರ್ ಕಲ್ಕೂರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News