ರಾಜ್ಯದ ಪ್ರವಾಹದ ಬಗ್ಗೆ ಮುಖ್ಯಮಂತ್ರಿಯಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ: ನೆರವಿನ ಭರವಸೆ

Update: 2020-10-16 16:34 GMT
ಫೈಲ್ ಚಿತ್ರ

ಬೆಂಗಳೂರು, ಅ.16: ಕರ್ನಾಟಕದಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾದ ಅನಾಹುತ ಕುರಿತಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ, ಮಾಹಿತಿ ಪಡೆದಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

''ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ  ಮಾತನಾಡಿದ್ದೇನೆ. ಪ್ರವಾಹದಿಂದ ಬಾಧಿತರಾದ ಕರ್ನಾಟಕದ ಸಹೋದರಿ ಮತ್ತು ಸಹೋದರರೊಂದಿಗೆ ನಾವು ಜೊತೆಯಾಗಿ ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದ ಎಲ್ಲ ಅಗತ್ಯ ನೆರವಿನ ಬೆಂಬಲದ ಭರವಸೆ ನೀಡಲಾಗಿದೆ'' ಎಂದು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News