ಭಾರೀ ಮಳೆ: ಬೆಳೆ ಹಾನಿಯ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಬಿ.ಸಿ.ಪಾಟೀಲ್

Update: 2020-10-16 17:01 GMT

ಮೈಸೂರು,ಅ.16: ಉತ್ತರ ಕರ್ನಾಟಕದಲ್ಲಿ ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಆಗಿರುವ ಬೆಳೆ ಹಾನಿಯ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಚ್ಚರಿಯ ಹೇಳಿಕೆ ನೀಡಿದರು.

ನಗರದಲ್ಲಿ ಶುಕ್ರವಾರ ಕೃಷಿ ಅಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಕಳೆದ ಬಾರಿ ಬಿದ್ದ ಮಳೆ ಹಾನಿ ಹಾಗೂ ಅದಕ್ಕೆ ನೀಡಿರುವ ಪರಿಹಾರದ ಬಗ್ಗೆ ಮಾಹಿತಿ ಇಲ್ಲ, ಶೀಘ್ರವೇ ತಿಳಿದುಕೊಳ್ಳುವೆ. ಇಂದಿನಿಂದ ಸರ್ವೆ ಕಾರ್ಯ ಆರಂಭಿಸಿದ್ದು, ಈಗ ನಷ್ಟದ ಪ್ರಮಾಣವನ್ನು ತಿಳಿಸಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರದ ಆರೋಪವು ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ.ಸೋಮಶೇಖರ್, ಹಾಗಾದರೆ ಡಿ.ಕೆ.ಶಿವಕುಮಾರ್ ಚುನಾವಣಾ ಪ್ರಚಾರಕ್ಕೆ ಹೋಗುವಂತಿಲ್ಲ ಎಂದು ತಿಳಿಸಿದರು.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುನಿರತ್ನ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದಲೇ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News