×
Ad

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2020-10-16 23:39 IST

ಬೆಂಗಳೂರು, ಅ.16: ಕರ್ನಾಟಕ ಸಾಂಸ್ಕೃತಿಕ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಸೆಸೆಲ್ಸಿ, ಪಿಯುಸಿಯಲ್ಲಿ ಶೇ.98ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಕಾಯಕ ಬಸವಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ತಮ್ಮ ಸ್ವವಿವರ ಹಾಗೂ 3 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಲಕೋಟೆಯ ಮೇಲೆ ಪ್ರಶಸ್ತಿಯ ಹೆಸರು ಬರೆದು ಅ.31ರೊಳಗೆ ಅಧ್ಯಕ್ಷರು, ಕರ್ನಾಟಕ ಸಾಂಸ್ಕೃತಿಕ ಪರಿಷತ್, ನಂ.14, ಗುರುಕುಲ, ಶಿವಕುಮಾರ ಸ್ವಾಮಿ ಲೇಔಟ್, ವಿವೇಕಾನಂದ ಶಾಲೆ ರಸ್ತೆ, ಹೆಸರುಘಟ್ಟ ಬೆಂ.88 ಹಾಗೂ ದೂ.99641-95968ಕ್ಕೆ ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News