ಸಿಎಂ ವಿರುದ್ಧವೇ ಆಯೋಗ ಚುನಾವಣಾ ಕೇಸು ದಾಖಲಿಸಿತ್ತು: ಸಚಿವ ರಮೇಶ್ ಜಾರಕಿಹೊಳಿ

Update: 2020-10-16 18:28 GMT

ಬೆಳಗಾವಿ, ಅ. 16: ಗೋಕಾಕ್ ಉಪ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧವೇ ಚುನಾವಣಾ ಆಯೋಗ ಮೊಕದ್ದಮೆ ದಾಖಲು ಮಾಡಿತ್ತು. ಇದೀಗ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲಿಸಿರುವುದರಲ್ಲಿ ವಿಶೇಷವೇನಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಇಂದಿಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದರೆ ಆಯೋಗ ಕೇಸು ದಾಖಲು ಮಾಡುವುದು ಸಹಜ. ಚುನಾವಣಾ ಆಯೋಗ ಒಂದು ಸ್ವಾಯತ್ತ ಸಂಸ್ಥೆ. ತಪ್ಪು ಮಾಡುವವರ ಮೇಲೆ ನಿಗಾ ವಹಿಸುವುದಲ್ಲದೆ, ಮೊಕದ್ದಮೆಯನ್ನು ದಾಖಲಿಸುತ್ತದೆ. ಆದರೆ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರ ರಾಜಕೀಯ ಕಾರಣಕ್ಕೆ ಆರೋಪ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News