ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ

Update: 2020-10-17 04:03 GMT

ಮೈಸೂರು, ಅ.17: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ: ಸಿ.ಎನ್.ಮಂಜುನಾಥ್ ದಸರಾ ಶನಿವಾರ ಉದ್ಘಾಟಿಸಿದರು.

ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಶನಿವಾರ ಬೆಳಗ್ಗೆ 7:45 ಶುಭ  ಲಗ್ನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ನವರಾತ್ರಿ ಆಚರಣೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇದೇ ವೇಳೆ ಕೋರೋನ ಯೋಧರಾದ ಸ್ಟಾಫ್ ನರ್ಸ್ ಪಿ.ಎಂ.ರುಕ್ಮಿಣಿ, ಆಶಾ ಕಾರ್ಯಕರ್ತೆ ನೂರ್ ಜಾನ್, ಪೌರ ಕಾರ್ಮಿಕೆ ಮರಗಮ್ಮ, ಸಾಮಾಜಿಕ ಕಾರ್ಯಕರ್ತ  ಅಯ್ಯೂಬ್ ಅಹ್ಮದ್, ಪೊಲೀಸ್ ಕಾನ್ ಸ್ಟೇಬಲ್ ಪಿ.ಕುಮಾರ್, ವೈದ್ಯಾಧಿಕಾರಿ ಡಾ.ನವೀನ್ ಟಿ.ಆರ್. ಹುಡುಗರನ್ನು ಮೈಸೂರು ಪೇಟ, ಶಾಲು, ಹಾರ, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಅಶ್ವತ್ ನಾರಾಯಣ್, ಸಚಿವ ಬಿ.ಸಿ.ಪಾಟೀಲ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎ.ಲ್.ನಾಗೇಂದ್ರ, ಹರ್ಷವರ್ಧನ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಪಂ ಸಿಇಓ ಡಿ.ಭಾರತಿ, ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಎಸ್ಪಿ ಸಿ.ಬಿ.ರಿಷ್ಯಂತ್, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News