ಅ.20: ಶ್ರೀನಿವಾಸ್ ವಿಶ್ವವಿದ್ಯಾನಿಲಯ ಘಟಿಕೋತ್ಸವ

Update: 2020-10-17 12:44 GMT

ಮಂಗಳೂರು, ಅ.17: ಶ್ರೀನಿವಾಸ್ ವಿಶ್ವವಿದ್ಯಾನಿಲಯದ 2ನೇ ವಾರ್ಷಿಕ ಘಟಿಕೋತ್ಸವ (ವರ್ಚುವಲ್) ಅ.20ರಂದು ಸಂಜೆ 4ಕ್ಕೆ ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಸಿಟಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಕುಲಪತಿ ಡಾ. ಪಿ.ಎಸ್.ಐತಾಳ್ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ‌ನಾರಾಯಣ ವರ್ಚುವಲ್ ವೇದಿಕೆಯ ಮೂಲಕ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶ್ರೀನಿವಾಸ್ ವಿಶ್ವವಿದ್ಯಾನಿಲ ಯದ ಕುಲಾಧಿಪತಿ ಸಿಎ ಎ.ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಘಟಿಕೋತ್ಸವದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾನಿಲಯವು ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ ಎಂದು ತಿಳಿಸಿದರು.

ಘಟಿಕೋತ್ಸವದಲ್ಲಿ 232 ಪದವಿ ಮತ್ತು 87 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಹಾಗೂ ಒಬ್ಬರು ಸಂಶೋಧನಾ ವಿದ್ಯಾರ್ಥಿಗೆ ಪಿಎಚ್‌ಡಿ, 1 ಡಿ.ಲಿಟ್ ಪದವಿ ಸಹಿತ 38 ರ್ಯಾಂಕ್ ಮತ್ತು 11 ಚಿನ್ನದ ಪದಕ ಸಹಿತ ಪದವಿ ಪ್ರದಾನ ಮಾಡಲಾಗುವುದು ಎಂದು ಡಾ. ಐತಾಳ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ್ ಮಯ್ಯ(ವೌಲ್ಯಮಾಪನ), ಡಾ. ಅಜಯ ಕುಮಾರ್ (ಅಭಿವೃದ್ಧಿ), ಮಾಧ್ಯಮ ವಿಭಾಗದ ಮುಖ್ಯಸ್ಥೆ ಅಶ್ವಿನಿ ಉಪಸ್ಥಿತರಿದ್ದರು.

...

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News