ಸಾಣೂರಿನಲ್ಲಿ ವಿಶ್ವ ಆಹಾರ ದಿನಾಚರಣೆ

Update: 2020-10-17 12:52 GMT

ಉಡುಪಿ, ಅ.16: ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ಹೊಸದಿಲ್ಲಿ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ಪರಂಪರಾಗತ ಕೃಷಿ ವಿಕಾಸ ಯೋಜನೆ ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಣೂರು ಮೂಡುಮನೆ ಉಮಾನಾಥ ಶೆಟ್ಟಿ ಮನೆ ವಠಾರದಲ್ಲಿ ಶುಕ್ರವಾರ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಕಳ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಜಯರಾಜ್‌ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಆಹಾರ ಉತ್ಪಾದನೆಯ ಪ್ರಮಾಣವನ್ನು ಅಧಿಕಗೊಳಿಸಲು ಕೃಷಿ ಇಲಾಖೆಯಲ್ಲಿ ಇರುವ ವಿವಿಧ ಕಾರ್ಯಕ್ರಮಗಳು, ಸವಲತ್ತುಗಳು ಹಾಗೂ ಸಬ್ಸಿಡಿಗಳ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ದ.ಕ.ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ನರಸಿಂಹ ಕಾಮತ್ ಮಾತನಾಡಿ, ಉತ್ತಮ ಆರೋಗ್ಯಕ್ಕೆ ಅಗತ್ಯ ವಾಗಿ ಬೇಕಾಗುವ ಪೋಷಕಾಂಶಗಳು, ಅವುಗಳ ಕೊರತೆಯಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಮಾತನಾಡಿದರು. ಪಾರಂಪರಿಕ ಕೃಷಿ ವಿಧಾನಕ್ಕೆ ಹೆಚ್ಚಿನ ಮಹತ್ವ ನೀಡಲು ರೈತರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬ್ರಹ್ಮಾವರದ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ಎನ್.ಈ ನವೀನ್, ರೈತರು ಮತ್ತು ರೈತ ಮಹಿಳೆಯರು ಭಾಗವಹಿಸಿದ್ದರು. ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ ಧನಂಜಯ ಸ್ವಾಗತಿಸಿದರು. ಡಾ. ಸಚಿನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು. ಜ್ಞಾನದೇವ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News