ದ.ಕ. ಜಿಲ್ಲೆ : ಕೋವಿಡ್ ಗೆ ಐವರು ಬಲಿ, 220 ಮಂದಿಗೆ ಕೊರೋನ ಸೋಂಕು

Update: 2020-10-17 14:10 GMT

ಮಂಗಳೂರು, ಅ.17: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 624ಕ್ಕೆ ಏರಿಕೆಯಾಗಿದೆ.

ಶನಿವಾರ ಹೊಸದಾಗಿ 220 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 27,959ಕ್ಕೆ ಏರಿಕೆ ಕಂಡಿದೆ. ಜೊತೆಗೆ ಒಂದೇ ದಿನ ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 391 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಕೊರೋನ ಮುಕ್ತರಾದವರ ಸಂಖ್ಯೆಯೂ 23,804ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3531 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News