ದ.ಕ.: ಸರಳ ದಸರಾ ಆಚರಣೆಗೆ ಡಿಸಿ ಆದೇಶ

Update: 2020-10-17 16:49 GMT

ಮಂಗಳೂರು, ಅ.17: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ನಾಡಹಬ್ಬ ದಸರಾವನ್ನು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿ ಆಚರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರಸಕ್ತ ವರ್ಷ ಅ.17ರಿಂದ 26ರವರೆಗೆ ಜಿಲ್ಲೆಯಾದ್ಯಂತ ದಸರಾವನ್ನು ಆಚರಿಸಲು ಸಾರ್ವಜನಿಕರು ಅತ್ಯಂತ ಸರಳವಾಗಿ ಕಾರ್ಯಕ್ರಮಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಸುರಕ್ಷಿತ ಅಂತರವನ್ನು ಕಡ್ಡಾಯ ವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸುರಕ್ಷಿತ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿ ಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಮಾಸ್ಕ್ ಬಳಕೆ, ಸುರಕ್ಷಿತ ಅಂತರ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಕೋವಿಡ್-19 ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜ ಕರು, ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಖಡಕ್ ಸೂಚನೆ ರವಾನಿಸಿದ್ದಾರೆ.

ದಸರಾ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಆವರಣದೊಳಗೆ ಮಾತ್ರ ಗರಿಷ್ಠ 10 ಹುಲಿ ವೇಷಾಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಅನುಮತಿ ನೀಡಲಾಗಿದೆ. ಹುಲಿ ವೇಷಧಾರಿಗಳು ದೇವಸ್ಥಾನದ ಹೊರಗೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವು ದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಮುಖಗವಸು ಧರಿಸದೆ ಸೇರತಕ್ಕಂತಹ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಎಲ್ಲ ನಿರ್ದೇಶನ ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News