ಐಎಂಎ ಬಹುಕೋಟಿ ವಂಚನೆ ಪ್ರಕರಣ: ಚಾರ್ಜ್‍ಶೀಟ್ ಸಲ್ಲಿಸಿದ ಸಿಬಿಐ

Update: 2020-10-17 17:19 GMT

ಬೆಂಗಳೂರು, ಅ.17: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸೇರಿದಂತೆ 28 ಜನರ ವಿರುದ್ಧ ಸಿಬಿಐ ತನಿಖಾಧಿಕಾರಿಗಳು ಪ್ರಾಥಮಿಕ ಆರೋಪ ಪಟ್ಟಿ(ಚಾರ್ಜ್‍ಶೀಟ್) ಸಲ್ಲಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ. 

ಅಂದಿನ, ಬೆಂಗಳೂರು ಉತ್ತರ ವಿಭಾಗದ ಸಹಾಯಕ ಆಯುಕ್ತ, ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಇನ್‍ಸ್ಪೆಕ್ಟರ್ ಜನರಲ್, ಪೂರ್ವ ವಿಭಾಗದ ಡಿಸಿಪಿ ಹಾಗೂ ಕಮರ್ಷಿಯಲ್ ಸ್ಟ್ರೀಟ್ ಇನ್‍ಸ್ಪೆಕ್ಟರ್‍ರನ್ನು ಒಳಗೊಂಡಂತೆ ಪ್ರಕರಣದಲ್ಲಿ ಆರೋಪಿತರಾಗಿರುವ ಖಾಸಗಿ ವ್ಯಕ್ತಿಗಳನ್ನು ಸಹ ಸೇರಿ 28 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

ಸರಕಾರಿ ತನಿಖಾ ಸಂಸ್ಥೆಯ ಕೆಲ ಅಧಿಕಾರಿಗಳು ಐಎಂಎ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿಲ್ಲ. ಜೊತೆಗೆ, ಕೆಪಿಐಡಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಿಲ್ಲ ಎಂದು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News