ಉತ್ತರಪ್ರದೇಶದಲ್ಲಿ ಕ್ರಿಮಿನಲ್ ಗಳ ರಕ್ಷಣೆ ಪ್ರಯತ್ನ ನಡೆಯುತ್ತಿದೆ: ರಾಹುಲ್ ಗಾಂಧಿ

Update: 2020-10-18 10:05 GMT

 ಹೊಸದಿಲ್ಲಿ: ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಅಪರಾಧ ಘಟನೆಗಳ ಹೆಚ್ಚುತ್ತಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಪ್ರದೇಶ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಹಾಗೂ ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ , ಉತ್ತರಪ್ರದೇಶ ಸರಕಾರವು ಕ್ರಿಮಿನಲ್‌ಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಭೇಟಿ ಬಚಾವೋ(ಹೆಣ್ಣು ಮಕ್ಕಳನ್ನು ರಕ್ಷಿಸಿ)ಎಂಬ ಅಭಿಯಾನ ಆರಂಭಿಸಿದ್ದರು.ಈಗ ಅಪರಾಧಿ ಬಚಾವೋ(ಅಪರಾಧಿ ರಕ್ಷಿಸಿ)ಎಂಬ ಅಭಿಯಾನ ನಡೆಯುತ್ತಿದೆ ಎಂದು ಟ್ವೀಟಿಸಿ, ಮಾಧ್ಯಮಗಳ ವರದಿಯನ್ನು ಟ್ಯಾಗ್ ಮಾಡಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರಪ್ರದೇಶದ ಮುಖ್ಯಮಂತ್ತಿಯವರೇ ಇದು ಯಾವ ಮಿಷನ್ ಅಡಿ ನಡೆಯುತ್ತಿದೆ ಎಂದು ಹೇಳುತ್ತೀರಾ?ಭೇಟಿ ಬಚಾವೊ(ಹೆಣ್ಣು ಮಕ್ಕಳನ್ನು ರಕ್ಷಿಸಿ) ಅಥವಾ ಅಪರಾಧಿ ಬಚಾವೊ(ಅಪರಾಧಿಗಳನ್ನು ರಕ್ಷಿಸಿ)ಎಂದು ಪ್ರಿಯಾಂಕಾ ಗಾಂಧಿ ಟ್ವೀಟಿಸಿದರು.

ಹತ್ರಸ್ ಪ್ರಕರಣದ ಬಳಿಕ ಕಾಂಗ್ರೆಸ್ ಪಕ್ಷ ಉತ್ತರಪ್ರದೇಶ ಸರಕಾರದ ವಿರುದ್ಧ ನಿರಂತರವಾಗಿ ಟೀಕಾ ದಾಳಿ ನಡೆಸುತ್ತಾ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News