×
Ad

ಕೋವಿಡ್-19 ಹಿನ್ನೆಲೆಯಲ್ಲಿ ನವರಾತ್ರಿ ಸರಳವಾಗಿ ಆಚರಣೆ: ಕೋಟ

Update: 2020-10-18 17:39 IST

ಉಡುಪಿ, ಅ.18: ಕೋವಿಡ್-19 ಹಿನ್ನೆಲೆಯಲ್ಲಿ ನವರಾತ್ರಿ ಮಹೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಅತ್ಯಂತ ಸರಳವಾಗಿ ಆಚರಿಸಲಾಗು ತ್ತಿದೆ ಎಂದು ಧಾರ್ಮಿಕ ದತ್ತಿ, ಮುಜರಾಯಿ, ಮೀನುಗಾರಿಕಾ ಸಚಿವ ಕೊೀಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪರವೂರಿನಿಂದ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ದಾನಿಗಳ ನೆರವಿನಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಇಂದ್ರಾಣಿ ಅತಿಥಿ ಗೃಹವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯ ಅಶೋಕ್ ನಾಯ್ಕಾ, ಉದ್ಯಮಿಗಳಾದ ಬುಡ್ನಾರು ಜಯಕರ ಶೆಟ್ಟಿ, ಪಿ. ಪುರುಷೋತ್ತಮ್ ಶೆಟ್ಟಿ, ಯಶ್‌ಪಾಲ್ ಎ.ಸುವರ್ಣ, ಹಿರಿಯರಾದ ಜಯರಾಜ್ ಹೆಗ್ಡೆ, ತನ್ಮಯ ಗೋಸ್ವಾಮಿ ಉಪಸ್ಥಿತರಿದ್ದರು.

ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರತ್ನಾಕರ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News