×
Ad

ವಿಶ್ವಕರ್ಮ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2020-10-18 17:40 IST

ಉಡುಪಿ, ಅ.18: ಉಡುಪಿ ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡಲು ಅರ್ಹ ರಾಗಿರುವ, ಸ್ವಸಮಾಜದ ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕುಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2019-20ನೇ ಸಾಲಿನಲ್ಲಿ ಒಂಬತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಅಧಿಕ ಅಂಕ ಗಳಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪ ಅಥವಾ ಉಡುಪಿಯ ಕನಕದಾಸ ಜ್ಯುವೆಲ್ಲರ್ಸ್‌ ಇಲ್ಲಿಂದ ಪಡೆದು ಸರಿಯಾದ ಮಾಹಿತಿ ಒದಗಿಸಿ ನ.7ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9448748397 ಸಂಪರ್ಕಿ ಸಬಹುದು ಎಂದು ಸಂಘದ ಅಧ್ಯಕ್ಷ ದಿವಾಕರ ವಿ.ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News