ಉಡುಪಿ : ಮತ್ತೆ 130 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Update: 2020-10-18 13:56 GMT

ಉಡುಪಿ, ಅ.18: ಜಿಲ್ಲೆಯಲ್ಲಿ ರವಿವಾರ ಇನ್ನೂ 130 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ಚಿಕಿತ್ಸೆಯಲ್ಲಿ ಸಂಪೂರ್ಣ ಗುಣಮುಖರಾದ 154 ಮಂದಿ ದಿನದಲ್ಲಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 130 ಮಂದಿಯಲ್ಲಿ ಮಕ್ಕಳು ಸೇರಿದಂತೆ 62 ಮಂದಿ ಪುರುಷರು ಹಾಗೂ 68 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 37 ಪುರುಷರು ಹಾಗೂ 51 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 52, ಕುಂದಾಪುರ ತಾಲೂಕಿನ 44 ಹಾಗೂ ಕಾರ್ಕಳ ತಾಲೂಕಿನ 31 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಉಳಿದ ಮೂವರು ಹೊರಜಿಲ್ಲೆಗಳಿಂದ ಚಿಕಿತ್ಸೆ ಗೆಂದು ಬಂದು ಇಲ್ಲಿ ಪಾಸಿಟಿವ್ ಬಂದವರು ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 130 ಮಂದಿಯಲ್ಲಿ 17 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ 113 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

154 ಮಂದಿ ಗುಣಮುಖ: ದಿನದಲ್ಲಿ ಒಟ್ಟು 154 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 18,732 ಆಗಿದೆ. ಜಿಲ್ಲೆಯಲ್ಲಿ ಸದ್ಯ 1923 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ತಿಳಿಸಿದರು.

2123 ನೆಗೆಟಿವ್: ಜಿಲ್ಲೆಯಲ್ಲಿ ಇಂದು ಒಟ್ಟು 2255 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 2123 ಮಂದಿ ನೆಗೆಟಿವ್ ಬಂದಿದ್ದು, 132 ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 20,830 ಆಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,57,115 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,36,285 ಮಂದಿ ನೆಗೆಟಿವ್ ಹಾಗೂ 20,830 ಮಂದಿ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 18,732 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 173 ಮಂದಿ ಮೃತಪಟ್ಟಿದ್ದಾರೆ.

ರವಿವಾರ ಕೋವಿಡ್ ಸೋಂಕಿನಿಂದ ಜಿಲ್ಲೆಯಲ್ಲಿ ಯಾರೂ ಮೃತಪಟ್ಟಿಲ್ಲ. ಹೀಗಾಗಿ ಮೃತರ ಸಂಖ್ಯೆ ಈಗಲೂ 173 ಆಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News