ರಾಜಧಾನಿಯಲ್ಲಿ 3,535 ಮಂದಿಗೆ ಕೊರೋನ ದೃಢ: 3,845 ಮಂದಿ ಚೇತರಿಕೆ

Update: 2020-10-18 16:47 GMT

ಬೆಂಗಳೂರು, ಅ.18: ನಗರದಲ್ಲಿ ರವಿವಾರದಂದು 3,535 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 3,845 ಸೋಂಕಿತರು ಬಿಡುಗಡೆಯಾಗಿದ್ದು, 25 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರಗೆ ಒಟ್ಟು 3,07,540 ಕೊರೋನ ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 3,525 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,39,579 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 64,435 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 18 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 8,49,747 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 10,01,967 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 23,81,342 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.12.77ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.15ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.77.54ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News