'ಕೊರೋನ ಜೊತೆಗೆ ಶಾಲಾ ಬದುಕು' ಪುಸ್ತಕ ಲೋಕಾರ್ಪಣೆ

Update: 2020-10-18 17:24 GMT

ಮೈಸೂರು,ಅ.18: ಜ್ಞಾನವರ್ಧಿನಿ ಎಜುಕೇಷನಲ್ ಟ್ರಸ್ಟ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ''ಕೊರೋನ ಜೊತೆಗೆ ಶಾಲಾ ಬದುಕು'' ಎಂಬ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಶಾಲಾ ಬದುಕು ಕೃತಿಯನ್ನು ವಿಧಾನಪರಿಷತ್ತಿನ ಸದಸ್ಯ ಹಾಗೂ ಮಾಜಿ ಸಚಿವ ಅಡಗೂರು ಹೆಚ್.ವಿಶ್ವನಾಥ್ ಅವರು ಲೋಕಾರ್ಪಣೆಗೊಳಿಸಿದರು.

ಶಿಕ್ಷಣ ತಜ್ಞ ಲೇಖಕ, ಕವಿ ಹಾಗೂ ಪ್ರಾಂಶುಪಾಲರಾದ ಡಾ.ಪ್ರಸನ್ನ ಹೆಗಡೆಯವರು ರಚಿಸಿದ್ದು, ಈ ಕೃತಿಯನ್ನು ಶಿಕ್ಷಣ ಮಂತ್ರಿಗಳಾದ ಸುರೇಶ್ ಕುಮಾರ್ ಅವರಿಗೂ ಹಾಗೂ ಕಾರ್ಮಿಕ ಹಾಗೂ ಸಕ್ಕರೆ ಖಾತೆಯ ಸಚಿವರಾದ ಶಿವರಾಮ ಹೆಬ್ಬಾರ ಅವರಿಗೂ ಅರ್ಪಣೆ ಮಾಡಲಾಗಿದೆ .

ಪ್ರಸ್ತುತ ವಿಶ್ವದಾದ್ಯಂತ ಹರಡುತ್ತಿರುವ ಮಹಾರೋಗ ಕೊರೋನದಿಂದ ವಿದ್ಯಾರ್ಥಿಗಳನ್ನು ರಕ್ಷಿಸುವ ಬಗ್ಗೆ ಹಾಗೂ ಕೊರೋನ ಕುರಿತ ಮುಂಜಾಗ್ರತೆಗಳ ಬಗ್ಗೆ ಈ ಕೃತಿಯಲ್ಲಿ ಸವಿಸ್ತಾರವಾಗಿ ವಿವರಿಸಲಾಗಿದೆ.

ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಾಂಡುರಂಗ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೊರಬದ ಮಲ್ಲಿಕಾರ್ಜುನ್ , ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್, ಡಾ.ಪ್ರಸನ್ನ ಹೆಗಡೆ, ಸಮಾಜ ಸೇವಕ ರಘುರಾಂ ವಾಜಪೇಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮೈಸೂರು,ಅ.18: ಜ್ಞಾನವರ್ಧಿನಿ ಎಜುಕೇಷನಲ್ ಟ್ರಸ್ಟ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ  “ಕೊರೋನಾ ಜೊತೆಗೆ ಶಾಲಾ ಬದುಕು” ಎಂಬ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News