ಪದವೀಧರ ಕ್ಷೇತ್ರಗಳ ಚುನಾವಣೆ: ಶಿಕ್ಷಕರನ್ನು ದೂರವಿಡುವುದು ಸರಿಯಲ್ಲ- ಬಸವರಾಜ ಹೊರಟ್ಟಿ

Update: 2020-10-18 17:33 GMT

ಬೆಂಗಳೂರು, ಅ.18: ಪದವೀಧರ ಮತ ಕ್ಷೇತ್ರಗಳ ಚುನಾವಣೆಯಲ್ಲಿ ಖಾಸಗಿ ಶಾಲೆಯ ಶಿಕ್ಷಕರು ಹಾಗೂ ಶಿಕ್ಷೇತರ ಸಿಬ್ಬಂದಿಗಳನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಾರದೆಂಬ ಸರಕಾರದ ಸೂಚನೆ ಸರಿಯಲ್ಲವೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಅವರು, ಪದವೀಧರ ಮತಕ್ಷೇತ್ರಗಳ ಚುನಾವಣೆಗಳಲ್ಲಿ ಸರಕಾರಿ ನೌಕರರು, ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಮತದಾರರಾಗಿದ್ದಾರೆ. ಆದರೆ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವವರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬಾರದೆಂದು ಸೂಚನೆಗಳು ಬಂದಿವೆ. ಇದು ಅವರ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಹೀಗಾಗಿ ಚುನಾವಣಾ ಆಯೋಗ ಇಂತಹ ಸುತ್ತೋಲೆ ಹೊರಡಿಸಬಾರದೆಂದು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News