ಮೈಸೂರು: ಕುಸಿದುಬಿದ್ದ ಶಾಸಕ ರಾಮದಾಸ್ ಆಸ್ಪತ್ರೆಗೆ ದಾಖಲು

Update: 2020-10-19 05:44 GMT

ಮೈಸೂರು,ಅ.19: ಉಸಿರಾಟದ ತೊಂದರೆಯುಂಟಾಗಿ ಅಸ್ವಸ್ಥರಾದ ಶಾಸಕ ಎಸ್.ಎ.ರಾಮದಾಸ್ ಅವರನ್ನು ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮದಾಸ್ ಅವರಿಗೆ ಇಂದು ಬೆಳಗ್ಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದು, ಅವರು ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಳೆದ ಎರಡು ದಿನಗಳಿಂದ ದಸರಾ ಕಾರ್ಯಕ್ರಮದಲ್ಲಿ ಅವರು ಸಕ್ರಿಯವಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News